Widgets Magazine

ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಂಗಳೂರು| Krishnaveni K| Last Modified ಸೋಮವಾರ, 21 ಜನವರಿ 2019 (15:56 IST)
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ನಿಧನಕ್ಕೆ ಕಿಚ್ಚ ಸುದೀಪ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
 
ನಿನ್ನೆಯೇ ಶ್ರೀಗಳು ಗಂಭೀರ ಸ್ಥಿತಿಯಲ್ಲಿದ್ದಾಗ ಟ್ವೀಟ್ ಮಾಡಿದ್ದ ಕಿಚ್ಚ ಸುದೀಪ್ ಶ್ರೀಗಳು ನಿಜವಾದ ಭಾರತ ರತ್ನ ಎಂದು ಕೊಂಡಾಡಿದ್ದರು. ಇಂದು ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ, ಶ್ರೀಗಳ ವಿವಿಧ ಫೋಟೋ ಸಂಗ್ರಹವನ್ನು ಪ್ರಕಟಿಸಿದ್ದಾರೆ.
 
ಅವರಲ್ಲದೆ, ನಟರಾದ ಉಪೇಂದ್ರ, ಗೋಲ್ಡನ್ ಸ್ಟಾರ್ ಗಣೇಶ್, ಜಗ್ಗೇಶ್ ಸೇರಿದಂತೆ ಅನೇಕರು ಶ್ರೀಗಳ ಜತೆ ಕಳೆದ ಕ್ಷಣಗಳನ್ನು ನೆನೆಸಿಕೊಂಡು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸ್ವಾಮೀಜಿಗಳ ನಿಧನದ ದುಃಖಾಚರಣೆ ಪ್ರಯುಕ್ತ ನಾಳೆ ಚಿತ್ರ ಪ್ರದರ್ಶನಗಳನ್ನು ರದ್ದುಪಡಿಸಿ ಶೋಕಾಚರಣೆ ಮಾಡಲು ತೀರ್ಮಾನಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :