ಸಂಕ್ರಾಂತಿಗೆ ಕಿಚ್ಚ ಸುದೀಪ್, ದರ್ಶನ್ ಕಡೆಯಿಂದ ಸಿಗಲಿದೆ ಭರ್ಜರಿ ಗಿಫ್ಟ್

ಬೆಂಗಳೂರು| Krishnaveni K| Last Modified ಗುರುವಾರ, 10 ಜನವರಿ 2019 (10:08 IST)
ಬೆಂಗಳೂರು: ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಗಲಿದೆ.
 
ಕಳೆದ ಕೆಲವು ದಿನಗಳಿಂದ ಡಿ ಬಾಸ್ ಸಿನಿಮಾ ಬಿಡುಗಡೆಯಾಗಿಲ್ಲ ಎಂದು ಬೇಸರದಲ್ಲಿದ್ದ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ ‘ಯಜಮಾನ’ ಚಿತ್ರದ ಹಾಡು ಬಿಡುಗಡೆ ಮಾಡಿ ಹಬ್ಬದ ಸಂಭ್ರಮ ಹೆಚ್ಚಿಸಲಿದ್ದಾರೆ. ಅದೂ ಯಜಮಾನ ಚಿತ್ರದ ಟೈಟಲ್ ಸಾಂಗ್ ಗಾಗಿ ದರ್ಶನ್ ಮಾಸ್ ಹಾಡಿಗೆ ಕುಣಿದಿದ್ದರು. ಆ ಹಾಡು ಸಂಕ್ರಾಂತಿಗೆ ರಿಲೀಸ್ ಆಗುತ್ತಿದೆ.
 
ಇನ್ನೊಂದೆಡೆ ಕಿಚ್ಚ ಸುದೀಪ್ ಕೂಡಾ ತಮ್ಮ ಬಹುನಿರೀಕ್ಷಿತ ಪೈಲ್ವಾನ್ ಸಿನಿಮಾದ ಮೊದಲ ಟೀಸರ್ ಸಂಕ್ರಾಂತಿ ಹಬ್ಬದ ದಿನ ಬಿಡುಗಡೆಯಾಗುತ್ತಿರುವುದಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪೈಲ್ವಾನ್ ಚಿತ್ರದ ಲುಕ್ ನೋಡಿ ಈಗಾಗಲೇ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಸುದೀಪ್ ಮೊದಲ ಟೀಸರ್ ನಲ್ಲಿ ಹೇಗೆ ಕಾಣಿಸಬಹುದು. ಈ ಚಿತ್ರದ ಪಾತ್ರ ಹೇಗಿರಬಹುದು ಎಂದು ನೋಡಲು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸಂಕ್ರಾಂತಿಯಂದು ಉತ್ತರ ಸಿಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :