ಬೆಂಗಳೂರು: ಕಿಚ್ಚ ಸುದೀಪ್ 2020 ಕ್ಕೆ ಒಂದು ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಿಚ್ಚ ಬಿಟ್ಟುಕೊಟ್ಟಿರಲಿಲ್ಲ.ಸುದೀಪ್ ರಿಮೇಕ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದಾಗ ಇದು ಪಕ್ಕಾ ಸ್ವಮೇಕ್ ಎಂದು ಒಮ್ಮೆ ಸ್ಪಷ್ಟನೆ ಕೊಟ್ಟಿದ್ದು ಬಿಟ್ಟರೆ ಸಿನಿಮಾ ಬಗ್ಗೆ ಇನ್ಯಾವ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ.ಇದೀಗ ಕಿಚ್ಚ ಸುದೀಪ್ ಏಳು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕಿಳಿಯುತ್ತಿರುವುದರ ಬಗ್ಗೆ ಮಾತನಾಡಿದ್ದಾರೆ.