Photo Courtesy: Twitterಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಚೆನ್ನೈನಲ್ಲಿ ಭರದಿಂದ ನಡೆಯುತ್ತಿದೆ. ಇದೀಗ ಕಿಚ್ಚ ಸುದೀಪ್ ಸಿನಿಮಾ ಲುಕ್ ಒಂದನ್ನು ಹೊರಬಿಟ್ಟಿದ್ದಾರೆ.ಮ್ಯಾಕ್ಸ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕ್ಲೈಮ್ಯಾಕ್ಸ್ ನಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಪ್ರಕಟಿಸುವ ಮೂಲಕ ಬಹಿರಂಗಪಡಿಸಿದ್ದಾರೆ.ಮ್ಯಾಕ್ಸ್ ಸಿನಿಮಾ ಭರ್ಜರಿ ಆಕ್ಷನ್ ದೃಶ್ಯಗಳಿರುವ ಮಾಸ್ ಸಿನಿಮಾ. ಈ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಸುದೀಪ್ ರೋಚಕ ಸಾಹಸ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿದ್ದಾರೆ