ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಈಗ ಸ್ಪಷ್ಟ ಉತ್ತರ ಸಿಕ್ಕಿದೆ. ತಮ್ಮ ಗಾಡ್ ಫಾದರ್ ಆಗಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ಬೆಂಬಲವಿರಲಿದೆ ಎಂದು ಸುದೀಪ್ ಘೋಷಿಸಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್, ಅಶೋಕ್ ಮುಂತಾದ ಬಿಜೆಪಿ ನಾಯಕರೊಂದಿಗೆ ಇಂದು ಸುದ್ದಿಗೋಷ್ಠಿ ನಡೆಸಿರುವ ಕಿಚ್ಚ ಸುದೀಪ್, ಈ ಬಾರಿ ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ಬೆಂಬಲವಿರಲಿದೆ ಎಂದಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ