ಬೆಂಗಳೂರು: ಇತ್ತೀಚೆಗಷ್ಟೇ ಬಿಡುಗಡೆಯಾದ ಪೈಲ್ವಾನ್ ಸಿನಿಮಾ ಕುರಿತು ನೆಗೆಟಿವ್ ಕಾಮೆಂಟ್ ಮಾಡುತ್ತಿರುವವರಿಗೆ, ಅದರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಸರೆರಚಾಟ ಮಾಡುತ್ತಿರುವವರ ಬಗ್ಗೆ ಕೊನೆಗೂ ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದು ಖಡಕ್ ಸಂದೇಶ ಕೊಟ್ಟಿದ್ದಾರೆ. ಆ ಪತ್ರದ ಸಾರಾಂಶ ಇಲ್ಲಿದೆ:ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ಎಲ್ಲರೂ ಅವರವರವ ಕೆಲಸದಲ್ಲಿ ತೊಡಗಿಸಿಕೊಂಡರೆ ಅವರಿಗೇ ಒಳ್ಳೆಯದು. ಇಂತಹ ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸುವ ಬದಲು ಸುಮ್ಮನಿರುವುದೇ ಒಳ್ಳೆಯದು.ಇದರಿಂದ ನಾವು ಯಾರೂ ಚಿಕ್ಕವರಾಗಲ್ಲ. ಸತ್ಯ ಯಾವತ್ತೂ ಶಾಶ್ವತವಾಗಿರುತ್ತದೆ.