ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಬಹುಭಾಷಾ ಸಿನಿಮಾ ‘ಕ್ರಾಂತಿ’ ಸಿನಿಮಾ ಬಗ್ಗೆ ಜೂನ್ ತಿಂಗಳ ಅಂತ್ಯಕ್ಕೆ ಅಪ್ ಡೇಟ್ ಸಿಗುವ ಸಾಧ್ಯತೆಯಿದೆ.ಚಿತ್ರದ ಮಾತಿನ ಭಾಗದ ಬಹುತೇಕ ಚಿತ್ರೀಕರಣ ಪೂರ್ತಿಯಾಗಿದ್ದು, 3-4 ಹಾಡುಗಳ ಚಿತ್ರೀಕರಣ ಬಾಕಿಯಿದೆ ಎನ್ನಲಾಗಿದೆ. ಹೀಗಾಗಿ ಜೂನ್ ತಿಂಗಳ ಅಂತ್ಯಕ್ಕೆ ಚಿತ್ರದ ಬಗ್ಗೆ ಅಪ್ ಡೇಟ್ ಸಿಗುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.ಈಗಾಗಲೇ ಹೈದರಾಬಾದ್, ಬೆಂಗಳೂರು ಮತ್ತು ಮೈಸೂರಿನ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದರ್ಶನ್ ಗೆ ನಾಯಕಿಯಾಗಿ ರಚಿತಾ