ಬೆಂಗಳೂರು: ಮುನಿರತ್ನ ನಿರ್ಮಾಣದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಬಹುತಾರಾಗಣವಿರುವ ಕುರುಕ್ಷೇತ್ರ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.ಆಗಸ್ಟ್ 9 ರಂದು ವರಮಹಾಲಕ್ಷ್ಮಿ ಹಬ್ಬಕ್ಕೆ ಉಡುಗೊರೆಯಾಗಿ ಕುರುಕ್ಷೇತ್ರ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಮೊದಲ 3 ಡಿ ಪೌರಾಣಿಕ ಚಿತ್ರ ಎಂಬುದು ಈ ಚಿತ್ರದ ಹೆಗ್ಗಳಿಕೆ. ಜತೆಗೆ ಕನ್ನಡದ ಬಹುತೇಕ ನಟರ ದಂಡೇ ಚಿತ್ರದಲ್ಲಿದೆ.ಹೀಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಕುತೂಹಲ ಕೆರಳಿದೆ. ಈಗಾಗಲೇ ಜನರು ಚಿತ್ರ ವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಈಗ