ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಗೊಂಬೆ

ಬೆಂಗಳೂರು| pavithra| Last Modified ಸೋಮವಾರ, 19 ಫೆಬ್ರವರಿ 2018 (06:24 IST)
ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ (ಶೃತಿ) ಪಾತ್ರಧಾರಿ ನೇಹಾ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ನೇಹಾಗೌಡ ಅವರು ತಮ್ಮ ಬಾಲ್ಯದ ಗೆಳೆಯ ಚಂದನ್ ಅವರ ಜೊತೆ ಕಳೆದ ವರ್ಷ ಮಾಡಿಕೊಂಡಿದ್ದು, ಭಾನುವಾರದಂದು ಮೈಸೂರು ರಸ್ತೆಯಲ್ಲಿರುವ ಸಾಯಿ ಪ್ಯಾಲೆಸ್ ನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಅವರ ಪತಿ ಚಂದನ್ ಅವರು ಬ್ಯಾಂಕಾಕ್ ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸಿನಿಮಾರಂಗದ ಸಾಕಷ್ಟು ಜನರು ಹಾಗೂ ಧಾರಾವಾಹಿಯ ಕಲಾವಿದರು ಕೂಡ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು.


ಮದುವೆ ನಂತರ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಗೊಂಬೆ ಪಾತ್ರವನ್ನು ಇವರೇ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :