‘ಆಚಾರ್ಯ’ ಚಿತ್ರದ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆ

ಹೈದರಾಬಾದ್| pavithra| Last Modified ಮಂಗಳವಾರ, 27 ಏಪ್ರಿಲ್ 2021 (11:34 IST)
ಹೈದರಾಬಾದ್ : ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ರಾಮ್ ಚರಣ್ ಅವರು ಜೊತೆಯಾಗಿ ನಟಿಸಿದ್ದಾರೆ.
ಈ ಚಿತ್ರದ ಹಾಡುಗಳನ್ನು ರಾಮಜೋಯ ಶಾಸ್ತ್ರಿ  ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ  ‘ಲಾಹೆ ಲಾಹೆ’ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಇದು ಜನರ ಮೆಚ್ಚುಗೆ ಪಡೆದಿತ್ತು. ಆದರೆ ಇದೀಗ ಈ ಚಿತ್ರದ ರಾಮ್ ಚರಣ್ ಮತ್ತು ಪೂಜಾ ಹೆಗ್ಡೆ ಜೋಡಿಯ ರೊಮ್ಯಾಂಟಿಕ್ ಹಾಡು ‘ನೀಲಾಂಬರಿ’ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ.> > ಈ ಹಾಡು ಅಧಿಕೃತವಾಗಿ ಬಿಡುಗಡೆಯಾಗುವ ಮುನ್ನ ಸೋರಕೆಯಾಗಿದ್ದರಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಹಾಗಾಗಿ ಈ ಹಾಡನ್ನು ನಿರ್ಮಾಪಕರು ಆದಷ್ಟು ಬೇಗ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :