ತೆಲುಗು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಳಿಕ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಹುಡುಗಿ ನಟಿ ಪ್ರಿಯಾಮಣಿ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಮದುವೆಯ ಬಳಿಕ ಕೊಂಚ ಮಟ್ಟಿಗೆ ಸಿನಿಮಾದ ಕೆಲಸಗಳಿಂದ ದೂರವಾಗಿದ್ದ ನಟಿ ಇದೀಗ ಮತ್ತೆ ಪ್ಲ್ಯಾಟ್ ಗೆ ಮರಳಿದ್ದಾರೆ.ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರಗಳಲ್ಲಿ ನಟಿಸಿರುವ ನಟಿ ಕನ್ನಡದಲ್ಲಿ ರಾಮ್, ಅಣ್ಣಾ ಬಾಂಡ್, ಕೋ ಕೋ, ವಿಷ್ಣುವರ್ಧನ, ಲಕ್ಷ್ಮಿ ಚಿತ್ರ ಸೇರಿದಂತೆ ಹಲವು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ.