ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಮದಗಜ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗುತ್ತಿದೆ.ಮದಗಜ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗಲಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಅವರಲ್ಲದೆ, ತೆಲುಗು ಸ್ಟಾರ್ ನಟ ಜಗಪತಿಬಾಬು ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿತ್ತು. ಟ್ರೈಲರ್ ಇಂದು ಸಂಜೆ 6.20 ಕ್ಕೆ ಲಾಂಚ್ ಆಗಲಿದೆ.