ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಚಿರಂಜೀವಿ

ಹೈದರಾಬಾದ್| pavithra| Last Modified ಮಂಗಳವಾರ, 23 ಫೆಬ್ರವರಿ 2021 (11:20 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರಿಗೆ ತುಂಬಾ ಆಪ್ತರಾಗಿದ್ದಾರೆ. ಹಾಗಾಗಿ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರ ಈ ಕೆಲಸದಿಂದ ತುಂಬಾ ಸಂತೋಷಪಟ್ಟ ಚಿರಂಜೀವಿ ಅವರಿಗೆ ಅಚ್ಚರಿಯ ಉಡುಗೊರೆಯೊಂದನ್ನು ನೀಡಿದ್ದಾರಂತೆ.

ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರು ಇತ್ತೀಚೆಗೆ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರದ ‘ಉಪ್ಪೇನಾ’ ಚಿತ್ರದಲ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದೆ. ಹೀಗಾಗಿ ಸಂತೋಷಗೊಂಡ ಚಿರಂಜೀವಿ ಅವರು ವೈಯಕ್ತಿಕ ಮೆಚ್ಚುಗೆ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ದೇವಿ ಶ್ರೀ ಪ್ರಸಾದ್  ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಧನ್ಯವಾದ ಅರ್ಪಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :