ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ಚಿತ್ರದಲ್ಲಿ ದಕ್ಷಿಣದ ಖ್ಯಾತ ನಟಿ ನಯನತಾರಾ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಯನತಾರಾ ಕುರುಕ್ಷೇತ್ರ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಜುಲೈ 23ರಿಂದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದ್ದು, ಚಿತ್ರದ ಪೂರ್ವ ತಯಾರಿಯಲ್ಲಿರುವ ಚಿತ್ರ ತಂಡ ನಯನತಾರಾಗೆ ಈ ಆಫರ್ ನೀಡಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಶ್ರೀರಾಮ ರಾಜ್ಯಂ ಚಿತ್ರದಲ್ಲಿ ಸೀತೆ ಪಾತ್ರದಲ್ಲಿ