ಹೈದರಾಬಾದ್: ನಟಿ ನಯನತಾರಾ-ವಿಘ್ನೇಶ್ ಜೋಡಿ ಕದ್ದು ಮುಚ್ಚಿ ಮದುವೆಯಾಗಿದ್ದಾರೆ, ಸದ್ಯದಲ್ಲೇ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲಿದ್ದಾರೆ ಎಂಬಿತ್ಯಾದಿ ಸುದ್ದಿ ಕೆಲವು ದಿನದಿಂದ ಹರಿದಾಡುತ್ತಿದೆ. ಇದಕ್ಕೀಗ ನಟಿಯೇ ಸ್ಪಷ್ಟನೆ ನೀಡಿದ್ದಾರೆ.ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಕೆಲವು ಸಮಯದಿಂದ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಇತ್ತೀಚೆಗೆ ಇಬ್ಬರೂ ಮದುವೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಈಗ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮಿಬ್ಬರ ಬಗ್ಗೆ ಬರುತ್ತಿರುವ ಸುದ್ದಿಗಳಿಗೆ ನಯನತಾರಾ ಸ್ಪಷ್ಟನೆ