ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಯಲ್ಲೀಗ ಸಂಭ್ರಮದ ವಾತಾವರಣ. ನಿಖಿಲ್ ಕುಮಾರಸ್ವಾಮಿ-ರೇವತಿ ದಂಪತಿಗೆ ಗಂಡು ಮಗುವಿನ ಜನನವಾಗಿದೆ. Photo Courtesy: Twitter ಇಂದು ರೇವತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ, ಎಚ್ ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಗಳಿಗೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ