ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟ ಒಳ್ಳೆ ಹುಡುಗ ಪ್ರಥಮ್ ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.ಕೆಲವು ಸಮಯದ ಹಿಂದೆ ಮನೆಯವರೇ ನೋಡಿ ನಿಶ್ಚಯಿಸಿದ ಭಾನುಶ್ರೀ ಎಂಬ ಯುವತಿಯ ಜೊತೆ ಪ್ರಥಮ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಮದುವೆ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡ್ಬೇಕೂಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಇನ್ವಿಟೇಷನ್ ತಲುಪಿಸುವುದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ