ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿರುವ ಪಡ್ಡೆಹುಲಿ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ರಾಜ್ಯಾಧ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಗುರುದೇಶಪಾಂಡೆ ನಿರ್ದೇಶನ ಮಾಡಿರೋ ಈ ಸಿನಿಮಾ ಮೂಲಕ ಶ್ರೇಯಸ್ ಮಾಸ್ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಅವರಿಗೆ ನಾಯಕಿಯಾಗಿ ಜೋಡಿಯಾಗಿರೋದು ನಿಶ್ವಿಕಾ ನಾಯ್ಡು!