ಬೆಂಗಳೂರು: ಕನ್ನಡದ ಹಿರಿಯ ನಟ ಅನಂತ್ ನಾಗ್ ಗೆ ಭಾರತದ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡಬೇಕೆಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆರಂಭಿಸಿದ ಅಭಿಯಾನಕ್ಕೆ ಭಾರೀ ಬೆಂಬಲ ಸಿಕ್ಕಿದೆ. ಹಿರಿಯ ನಟನಿಗೆ ಪದ್ಮಪ್ರಶಸ್ತಿ ನೀಡಬೇಕೆಂಬ ಈ ಪ್ರಯತ್ನಕ್ಕೆ ನಾವೆಲ್ಲರೂ ಒಂದಾಗಿ ಕೈ ಜೋಡಿಸೋಣ ಎಂದು ರಿಷಬ್ ಆನ್ ಲೈನ್ ಅಭಿಯಾನಕ್ಕೆ ಕರೆ ನೀಡಿದ್ದರು.ಇದಕ್ಕೀಗ ಜನಸಾಮಾನ್ಯರಿಂದ ಹಿಡಿದು ಗಣ್ಯರವರೆಗೆ ಭಾರೀ ಬೆಂಬಲ ಸಿಕ್ಕಿದೆ. ಸಂಸದ ಪ್ರತಾಪ್ ಸಿಂಹ, ಅನಂತ್ ನಾಗ್ ಗೆ