ಬೆಂಗಳೂರು: ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ವರನಟ ರಾಜ್ ಕುಮಾರ್ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ಇಂದು ಬೆಳಿಗ್ಗೆ 4.40 ರ ಸುಮಾರಿಗೆ ಕೊನೆಯುಸಿರೆಳೆದರು.2 ಗಂಟೆ ಕಾಲ ಅವರ ನಿವಾಸದಲ್ಲಿ ಕುಟುಂಬದವರಿಗಾಗಿ ಅಂತಿಮ ದರ್ಶನ ನೀಡಿ ನಂತರ ಸದಾಶಿವ ನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.