ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರ ಏಪ್ರಿಲ್ 9ರಂದು ಬಿಡುಗಡೆಯಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಸಂಗ್ರಹ ಮಾಡುತ್ತಿದೆ. ಈ ನಡುವೆ ಇದೀಗ ಪವನ್ ಕಲ್ಯಾಣ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಅವರು ಪ್ರಸ್ತುತ ಹೋಮ್ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದ್ದಾರೆ. ಭದ್ರತಾ ಸದಸ್ಯರು ಮತ್ತು ಕಾರ್ಯ ವ್ಯವಸ್ಥಾಪಕರು ಸೇರಿದಂತೆ ಅವರ ಹೆಚ್ಚಿನ ವೈಯಕ್ತಿಕ ಸಿಬ್ಬಂದಿಗಳು ಕಳೆದ ಕೆಲವು ದಿನಗಳಿಂದ ಕೊರೊನಾ ವೈರಸ್ ಪರೀಕ್ಷೆ