ಮುಂಬೈ: ಸೌತ್ ಸುಂದರಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದ್ದು ಇದಕ್ಕೆಲ್ಲಾ ಮೂಲ ಕಾರಣ ದುಬೈನಲ್ಲಿ ನಡೆದಿದ್ದ ಜಗಳ ಎಂಬ ಸುದ್ದಿ ಹರಡಿದೆ.ಟಾಲಿವುಡ್ ಬೆಡಗಿ ಪೂಜಾ ಹೆಗ್ಡೆ ದುಬೈನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪಪ್ಪಾರಾಜಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು.ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿಯ ಆಪ್ತರು ಅಂತಹ ಘಟನೆ ನಡೆದೇ ಇಲ್ಲ.