ಚೆನ್ನೈ : ಕಂಗನಾ ರನೌತ್ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ ತಮಿಳುನಾಡಿನ ಪ್ರಸಿದ್ಧ ರಾಜಕಾರಣಿ ದಿ. ಜಯಲಲಿತಾ ಅವರ ಜೀವನಚರಿತ್ರೆಯನ್ನಾಧರಿಸಿದ ಚಿತ್ರ ‘ತಲೈವಿ’ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಈ ಚಿತ್ರವನ್ನು ಏಪ್ರಿಲ್ 23ರಂದು ದೇಶದಾದ್ಯಂತ ಎಲ್ಲಾ ಭಾಷೆಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಈ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ ಎನ್ನಲಾಗಿದೆ.ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ