Photo Courtesy: Twitterಬೆಂಗಳೂರು: ಕೆಜಿಎಫ್, ಉಗ್ರಂನಂತಹ ಆಕ್ಷನ್ ಪ್ಯಾಕ್ಡ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ನಿರ್ದೇಶಕ ಪ್ರಶಾಂತ್ ನೀಲ್ ಗೆ ಇಂದು ಜನ್ಮದಿನದ ಸಂಭ್ರಮ.ಅವರ ಜನ್ಮದಿನಕ್ಕೆ ಹೊಂಬಾಳೆ ಫಿಲಂಸ್ ಸೇರಿದಂತೆ ಅಭಿಮಾನಿಗಳು, ಸ್ನೇಹಿತರು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ. ಮೂಲತಃ ಕನ್ನಡಿಗರಾದರೂ ಪ್ರಶಾಂತ್ ನೀಲ್ ಈಗ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ.ಕೆಜಿಎಫ್ 2 ಸಿನಿಮಾ ಬಳಿಕ ಅವರು ತೆಲುಗಿನಲ್ಲಿ ಸಲಾರ್, ಜ್ಯೂ.ಎನ್ ಟಿಆರ್ ಜೊತೆಗೆ ಇನ್ನೊಂದು ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.