ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.ನಾಳೆ ವಿಶ್ವದಾದ್ಯಂತ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಬಾಚುವ ವಿಶ್ವಾಸವಿದೆ. ಈ ಸಿನಿಮಾದ ಬಜೆಟ್ ಸುಮಾರು 400 ಕೋಟಿ ರೂ. ಬಹುಕೋಟಿ ವೆಚ್ಚದ ಸಿನಿಮಾದಲ್ಲಿ ಅಭಿನಯಿಸಲು ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ನಿರ್ದೇಶಕ ಪ್ರಶಾಂತ್ ನೀಲ್