ಭುವನ್ ತೊಡೆಗೆ ಕಚ್ಚಿ ಗಾಯಗೊಳಿಸಿದ ಆರೋಪಕ್ಕೆ ಸಿಲುಕಿರುವ ಪ್ರಥಮ್, ಭುವನ್ ವಿರುದ್ಧ ಪ್ರತಿ ದೂರು ನೀಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ನೀಡಿದ್ದಾರೆ. ಮೊದಲು ಜಗಳ ತೆಗೆದಿದ್ದು ಭುವನ್, ನನ್ನ ಮೇಲೆ ಹಲ್ಲೆ ನಡೆಸಿ ಕುತ್ತಿಗೆಗೆ ಗಾಯಗೊಳಿಸಿರುವುದಾಗಿ ಪ್ರಥಮ್ ದೂರು ನೀಡಿದ್ದಾರೆ. ನಿನ್ನೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಪ್ರಥಮ್, ರಾತ್ರಿ 12.30ರ ಸುಮಾರಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಿನ್ನೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಕೇಳಿದಾಗ ದೂರು