ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಉದಯ ಮ್ಯೂಸಿಕ್ ವಾಹಿನಿ ಅವಮಾನ ಮಾಡಿದೆ ಎಂದು ಆರೋಪಿಸಿ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ ಬಳಿಕ ವಾಹಿನಿ ಕ್ಷಮೆ ಕೇಳಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ಫೋಟೋವನ್ನು ತಿರುಚಿ ಈ ನಟ ಯಾರೆಂದು ಗುರುತಿಸಿ ಎಂದು ವೀಕ್ಷಕರೊಬ್ಬರಿಗೆ ಪ್ರಶ್ನೆ ಕೇಳಲಾಯಿತು. ಆದರೆ ಈ ರೀತಿ ನಟನ ಫೋಟೋವನ್ನು ತಿರುಚಿರುವುದು ಅವರಿಗೆ ಮಾಡಿದ ಅವಮಾನ ಎಂದು ಅಪ್ಪು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ