Photo Courtesy: Twitterಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ದೊಡ್ಮನೆ ತಯಾರಿ ನಡೆಸಿದೆ.ಅಕ್ಟೋಬರ್ 28 ರಂದು ಗಂಧದ ಗುಡಿ ಸಾಕ್ಷ್ಯಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಅಂದರೆ ಅಕ್ಟೋಬರ್ 21 ರಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ದೊಡ್ಮನೆ ತಯಾರಿ ನಡೆಸಿದೆ.ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿವರನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ಆಹ್ವಾನಿಸಿದ್ದಾರೆ.