ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೀವನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಅಭಿಮಾನಿಗಳಿಗೆ ಸಿಹಿ ಸುದ್ದಿ ಅಂದರೆ, ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ ‘ವಾಣಿಜ್ಯ ಕನ್ನಡ 3’ ನಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ. ಪತ್ರಕರ್ತ