ಬೆಂಗಳೂರು: ಸಿನಿಮಾ ಜೊತೆಗೆ ಸಮಾಜ ಸೇವೆ ಮೂಲಕವೂ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಜೀವನ ಕತೆ ಇನ್ನು ಮಕ್ಕಳಿಗೆ ಶಾಲಾ ಪಠ್ಯ ಪುಸ್ತಕದಲ್ಲಿ ಸಿಗಲಿದೆ.4 ಅಥವಾ 5 ನೇ ತರಗತಿ ಮಕ್ಕಳ ಪಠ್ಯ ಪುಸ್ತಕದಲ್ಲಿ ಪುನೀತ್ ಜೀವನ ಕತೆಯನ್ನು ಅಳವಡಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಅಭಿಮಾನಿಗಳು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದರು. ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಪುನೀತ್