ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈ ವರ್ಷ ಯುವರತ್ನ, ಜೇಮ್ಸ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅದರ ಹೊರತಾಗಿ ಅವರು ಹೊಸ ಸಿನಿಮಾವೊಂದನ್ನು ಮಾಡುತ್ತಾರಂತೆ. ಹಾಗಂತ ಸಂದರ್ಶನವೊಂದರಲ್ಲಿ ಅವರೇ ಹೇಳಿಕೊಂಡಿದ್ದಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆಗೆ ಪುನೀತ್ ಹೊಸ ಸಿನಿಮಾ ಮಾಡುತ್ತಾರಂತೆ. ಹಲವು ಸಮಯದ ಮೊದಲೇ ನಮ್ಮಿಬ್ಬರ ನಡುವೆ ಸಿನಿಮಾ ಮಾತುಕತೆ ನಡೆದಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಮುಂದೆ ನಾನು ಅವರ ನಿರ್ದೇಶನದಲ್ಲಿ ಒಂದು ಸಿನಿಮಾ ಮಾಡಲಿದ್ದೇನೆ