Widgets Magazine

ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್

ಬೆಂಗಳೂರು| pavithra| Last Modified ಮಂಗಳವಾರ, 22 ಮೇ 2018 (08:52 IST)
ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಧ ರಮಣ ಧಾರಾವಾಹಿಯ ನಾಯಕ ನಟ ಸ್ಕಂದ ಅಶೋಕ್ ಅವರು ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರಂತೆ.


ಅವರು ಮದುವೆಯಾಗುತ್ತಿರುವ ಹುಡುಗಿ ಹೆಸರು ಶಿಕಾ ಪ್ರಸಾದ್.
ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿರುವ ಶಿಕಾ ಅವರನ್ನು ಸ್ಕಂದ ಅವರು ನಾಲ್ಕು ವರೆ ವರ್ಷದಿಂದ ಪ್ರೀತಿ ಮಾಡುತ್ತಿದ್ದು, ಇದೀಗ ಆಕೆಯ ಜೊತೆ ಹಸೆಮಣೆ ಏರಲು ಸಿದ್ಧರಾಗಿದ್ದಾರೆ.
ಇತ್ತೀಚಿಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿರುವ ಶಿಕಾ ಹಾಗೂ ಸ್ಕಂದ ಇದೇ ತಿಂಗಳ ಅಂದರೆ ಮೇ 30 ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಮದುವೆ ಸಮಾರಂಭ ನಡೆಯಲಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್


ಇದರಲ್ಲಿ ಇನ್ನಷ್ಟು ಓದಿ :