ಬೆಂಗಳೂರು: ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ನಟಿ ರಾಧಿಕಾ ಪಂಡಿತ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ರಾಧಿಕಾ ನೀಡಿದ್ದಾರೆ.ಕೊರೋನಾ ಕಾರಣದಿಂದ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಸುರಕ್ಷತೆ ದೃಷ್ಟಿಯಿಂದ ಯಾರೂ ಮನೆ ಹತ್ತಿರ ಬಂದು ವಿಶ್ ಮಾಡುವ ಪ್ರಯತ್ನ ಮಾಡಬೇಡಿ. ನಿಮ್ಮೆಲ್ಲರ ಸಂದೇಶಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಕಳುಹಿಸಿ, ಸಾಧ್ಯವಾದಷ್ಟು ಓದಿ ಪ್ರತಿಕ್ರಿಯಿಸುವ ಪ್ರಯತ್ನ ಮಾಡುತ್ತೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ