ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯಿಸಿರುವ ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಯಿದೆ.ಈ ಸಿನಿಮಾ ಇದೇ ವರಮಹಾಲಕ್ಷ್ಮಿ ಹಬ್ಬಕ್ಕೆ ಅಂದರೆ ಆಗಸ್ಟ್ 5 ರಂದು ಬಿಡುಗಡೆಯಾಗುವುದಾಗಿ ಈ ಮೊದಲು ಹೊಂಬಾಳೆ ಫಿಲಂಸ್ ಘೋಷಣೆ ಮಾಡಿತ್ತು. ಆದರೆ ಈಗ ಚಿತ್ರ ಬಿಡುಗಡೆ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹೊಂಬಾಳೆ ಘೋಷಿಸಿದೆ.ಕೆಲವು ಕಾರಣಾಂತರಗಳಿಂದ ರಸದೌತಣ ನಿಮ್ಮ ಮುಂದೆ ಬರಲು ತಡವಾಗಬಹುದು ಎಂದು ಹೊಂಬಾಳೆ ಫಿಲಂಸ್ ಟ್ವೀಟ್ ಮಾಡಿದೆ.