ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು ಇತ್ತೀಚೆಗೆ ತಮ್ಮ ‘ಆರ್.ಆರ್.ಆರ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಈ ನಡುವೆ ಇದೀಗ ‘ಆರ್.ಆರ್.ಆರ್’ ಚಿತ್ರದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ಜನರಲ್ಲಿ ಹಲವಾರು ಪ್ರಶ್ನೆಯನ್ನು ಹುಟ್ಟುಹಾಕಿದ್ದಾರೆ ಎನ್ನಲಾಗಿದೆ.