ಬೆಂಗಳೂರು: ತಮ್ಮ ರಂಗಿತರಂಗ ಸಿನಿಮಾದ ಮೂಲಕ ಹೆಸರು ಗಳಿಸಿದ ನಿರ್ದೇಶಕ ಅನೂಪ್ ಭಂಡಾರಿ ಈಗ ರಾಜರಥ ಸಿನಿಮಾದ ಮೂಲಕ ಮತ್ತೊಮ್ಮೆ ಪ್ರೇಕ್ಷಕನ ಮನಸ್ಸು ಸೆಳೆದಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಶುರುವಾಗುತ್ತಲೇ ಸಾಕಷ್ಟು ಸುದ್ದಿ ಮಾಡುತ್ತಿತ್ತು. ಇತ್ತೀಚೆಗೆ ಬಿಡುಗಡೆಯಾಗಿರುವ ಎರಡೂವರೆ ನಿಮಿಷದ ಟ್ರೇಲರ್ ಮತ್ತಷ್ಟು ಕುತೂಹಲ ಮೂಡಿಸುತ್ತಿದೆ. ಒಂದಾನೊಂದು ಕಾಲ್ದಲ್ಲಿ, ಒಂದಾನೊಂದು ಊರಲ್ಲಿ, ಒಬ್ಳು ಸುಂದರವಾದ ಹುಡ್ಗಿ. ಅವಳಿಗೆ ಒಬ್ಬ ಹುಡ್ಗ ಇದ್ದ. ಆದ್ರೆ ಅವ್ನು ಹೀರೊ ಅಲ್ಲ...