ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ಬಳಿಕ ನಟಿಸುತ್ತಿರುವ ಸಪ್ತ ಸಾಗರದಾಚೆ ಎಲ್ಲೋ ಅನೌನ್ಸ್ ಆಗಿ ಕೆಲವು ದಿನಗಳೇ ಕಳೆದಿವೆ.ಇದೀಗ ಆ ಸಿನಿಮಾಗೆ ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರಿದೆ. ಈ ವೇಳೆ ರಕ್ಷಿತ್ ಶೆಟ್ಟಿ ಹಾಗೂ ಚಿತ್ರತಂಡದವರು ಉಪಸ್ಥಿತರಿದ್ದರು.ಶಿವರಾತ್ರಿಯಂದು ಈ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ರಕ್ಷಿತ್ ಮನು ಎಂಬ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ನಾಯಕಿಯಾಗಿ