ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನೀಡಿದ ಹೇಳಿಕೆಯಿಂದ ಮನನೊಂದು ನಿರ್ದೇಶಕ ಪ್ರೇಮ್ ಮಾಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಸಾಕಷ್ಟು ಸುದ್ದಿ ಮಾಡಿತ್ತು. ಈ ಬಗ್ಗೆ ಈಗ ಪ್ರೇಮ್ ಪತ್ನಿ, ರಕ್ಷಿತಾ ಪ್ರತಿಕ್ರಿಯೆ ನೀಡಿದ್ದಾರೆ. ರಕ್ಷಿತಾ ಪ್ರೇಮ್ ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಖೇದ ವ್ಯಕ್ತಪಡಿಸಿದ್ದಾರೆ. ನಮ್ಮ ಇಂಡಸ್ಟ್ರಿ ಎಂದರೆ ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರಿಲ್ಲ, ಸಣ್ಣವರಲ್ಲ. ನಾವೆಲ್ಲರೂ ಪರಸ್ಪರ ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ.ಅವರವರ ಕೆಲಸ ಅವರವರನ್ನು ದೊಡ್ಡವರು