ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿನ ಖಿನ್ನತೆಗೊಳಗಾಗಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೇ ಸ್ಯಾಂಡಲ್ ವುಡ್ ನಟ-ನಟಿಯರೂ ಬೇಸರ ವ್ಯಕ್ತಪಡಿಸಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ನಡುವೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಮಾನಸಿಕ ಖಿನ್ನತೆ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದು ಹಿಂದೊಮ್ಮೆ ತಾವೂ ಈ ಪರಿಸ್ಥಿತಿ ಎದುರಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಈ ಮಾನಸಿಕ ಪರಿಸ್ಥಿತಿಯಿಂದ ಹೊರಬರಬೇಕಾದರೆ ನಮ್ಮ ಮನಸ್ಸಿನ