ಕೊರೊನಾ ಸೋಂಕಿಗೆ ಒಳಗಾದ ರಾಮ್ ಚರಣ್; ಆರೋಗ್ಯ ವಿಚಾರಿಸಿದ ಟಾಲಿವುಡ್ ನ ಖ್ಯಾತ ನಟ

ಹೈದರಾಬಾದ್| pavithra| Last Modified ಗುರುವಾರ, 31 ಡಿಸೆಂಬರ್ 2020 (16:57 IST)
ಹೈದರಾಬಾದ್ : ಟಾಲಿವುಡ್ ನಟ ರಾಮ್ ಚರಣ್ ತೇಜ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿರವುದಾಗಿ ಅವರು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಇದಕ್ಕೆ ಅಭಿಮಾನಿಗಳು ಪ್ರತಿಕ್ರಿಯಿಸಿ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಅವರು ಟ್ವೀಟ್ ಮೂಲಕ ಕೊರೊನಾದಿಂದ ಬಹಳ ಬೇಗನೆ ಚೇತರಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಟ ರಾಮ್ ಚರಣ್, ತನ್ನ ಬಗೆಗಿನ ಕಾಳಜಿಗೆ ಧನ್ಯವಾದ ತಿಳಿಸಿದ್ದಾರೆ. ಈ ಎರಡು ಟ್ವೀಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಮೂಲಕ ಇವರಿಬ್ಬರು ಉತ್ತಮ ಸ್ನೇಹಿತರು ಎಂಬುದು ಬಹಿರಂಗವಾಗಿದೆ.ಇದರಲ್ಲಿ ಇನ್ನಷ್ಟು ಓದಿ :