ಬೆಂಗಳೂರು: ಕೆಜಿಎಫ್ ಸಿನಿಮಾ ಬಂದ ಮೇಲೆ ಕನ್ನಡ ಚಿತ್ರರಂಗವನ್ನು ಬೇರೆಯವರು ನೋಡುವ ದೃಷ್ಟಿಕೋನವೇ ಬದಲಾಗಿದೆ. ಅದೇ ವಿಚಾರದ ಬಗ್ಗೆ ಇದೀಗ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ. ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಸುದ್ದಿಯ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ ‘ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಾತ್ರವಲ್ಲ, ದಕ್ಷಿಣ ಭಾರತದ ಸಿನಿಮಾ