ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.ರಿಯಲ್ ಸ್ಟಾರ್ ಉಪೇಂದ್ರಗೆ ಐ ಆಮ್ ಆರ್ ಎನ್ನುವ ಸಿನಿಮಾ ನಿರ್ದೇಶಿಸುತ್ತಿರುವ ರಾಮ್ ಗೋಪಾಲ್ ವರ್ಮಾ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಗಾಗಿ ಬೆಂಗಳೂರಿಗೆ ಬಂದಿದ್ದರು.ಈ ವೇಳೆ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ್ದು, ಇದೊಂದು ಅದ್ಧುತ ಸಿನಿಮಾವಾಗಲಿದೆ. ಜುಲೈ 28 ರಂದು ಇಡೀ ಸಿನಿಮಾ ವೀಕ್ಷಿಸಲು ಕಾಯುತ್ತಿರುವುದಾಗಿ ಹೇಳಿದ್ದಾರೆ.