ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದಿಗೂ ಕ್ವೀನ್ ಎಂದೇ ಕರೆಯಿಸಿಕೊಳ್ಳುವ ನಟಿ ರಮ್ಯಾ ಕಮ್ ಬ್ಯಾಕ್ ಮಾಡುತ್ತಿದ್ದಾರೆಂದರೆ ಅಭಿಮಾನಿಗಳಿಗೆ ಖುಷಿಯೋ ಖುಷಿ.ರಮ್ಯಾ ಹೊಸ ಸಿನಿಮಾ ಘೋಷಣೆ ಮಾಡಿದ ಬೆನ್ನಲ್ಲೇ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂತೋಷ ಹೊರಹಾಕುತ್ತಿದ್ದಾರೆ. ಆದರೆ ಅವರು ನಿರ್ಮಾಪಕಿಯಾಗುತ್ತಿದ್ದಾರಷ್ಟೇ. ನಟನೆ ಬಗ್ಗೆ ಇನ್ನೂ ಏನೂ ಹೇಳಿಲ್ಲ.ಪುನೀತ್ ರಾಜ್ ಕುಮಾರ್ ಅವರಿಂದ ಹಿಡಿದು ಕನ್ನಡದ ಬಹುತೇಕ ಸ್ಟಾರ್ ನಟರಿಗೆ ಜೋಡಿಯಾಗಿ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದ ರಮ್ಯಾ ತಮಿಳಿಗೂ