ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ.ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಜೊತೆ ರಮ್ಯಾ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ರಮ್ಯಾ ಆಗಲೀ ರಾಜ್ ಬಿ ಶೆಟ್ಟಿ ಆಗಲೀ ಎಲ್ಲೂ ಬಾಯ್ಬಿಟ್ಟಿರಲಿಲ್ಲ.ಇದೀಗ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ನಾಳೆ ಬೆಳಿಗ್ಗೆ 11.15 ಕ್ಕೆ ಸಿಹಿ ಸುದ್ದಿ