ಬಿಗ್ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ರಾಂಧವ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಡೋ ಘಳಿಗೆ ಹತ್ತಿರಾಗುತ್ತಿದೆ. ಇದೇ ಇಪ್ಪತ್ಮೂರನೇ ತಾರೀಕಿನಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸುನೀಲ್ ಆಚಾರ್ಯ ನಿರ್ದೇಶನದ ಈ ಚಿತ್ರ ಆರಂಭ ಕಾಲದಿಂದಲೂ ಸಾಗಿ ಬಂದಿರೋದೇ ರೋಚಕ ಹಾದಿಯಲ್ಲಿ. ಅಂಥಾದ್ದೇ ಕಥೆಯೊಂದು ಈ ಸಿನಿಮಾದಲ್ಲಿದೆ ಎಂಬಂಥಾ ಸ್ಪಷ್ಟ ಚಿತ್ರಣ ಈಗಾಗಲೇ ಚಿತ್ರತಂಡಕ್ಕೆ ಸಿಕ್ಕಿ ಹೋಗಿದೆ. ಈವರೆಗೆ ಟೀಸರ್ ಮತ್ತು ಟ್ರೇಲರ್ಗಳಲ್ಲಿ ಅದೆಂಥಾ ಕುತೂಹಲಕ್ಕೆ ಕಾರಣವಾಗಿದ್ದರೂ ಕೂಡಾ ಕಥೆಯ