ಕೊನೆಗೂ ಪೊಗರು ಪ್ರಚಾರಕ್ಕೆ ರಶ್ಮಿಕಾ ಮಂದಣ್ಣ ಸಾಥ್

ಬೆಂಗಳೂರು| Krishnaveni K| Last Modified ಬುಧವಾರ, 20 ಜನವರಿ 2021 (12:43 IST)
ಬೆಂಗಳೂರು: ಕನ್ನಡ ಸಿನಿಮಾ ಪೊಗರು ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ ಎಂಬ ಟೀಕೆಗಳ ಬೆನ್ನಲ್ಲೇ ಈ ಸಿನಿಮಾ ರಿಲೀಸ್ ಡೇಟ್ ಬಗ್ಗೆ ಟ್ವೀಟ್ ಮಾಡಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.
 


ಧ‍್ರುವ ಸರ್ಜಾ ನಾಯಕರಾಗಿರುವ ಪೊಗರು ಸಿನಿಮಾದಲ್ಲಿ ರಶ್ಮಿಕಾ ನಾಯಕಿ. ಈ ಸಿನಿಮಾ ತೆಲುಗು, ತಮಿಳಿನಲ್ಲೂ ಬಿಡುಗಡೆಯಾಗಲಿದೆ. ಫೆಬ್ರವರಿ 19 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಡೇಟ್ ಅನೌನ್ಸ್ ಆದರೂ ರಶ್ಮಿಕಾ ಪ್ರಚಾರದಿಂದ ದೂರವುಳಿದಿದ್ದಾರೆ ಎಂಬ ಟೀಕೆಗಳಿತ್ತು. ಆದರೆ ಇದೀಗ ರಶ್ಮಿಕಾ ಪೊಗರು ಬಗ್ಗೆ ಟ್ವೀಟ್ ಮಾಡುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :