ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೆಲವು ದಿನಗಳ ಹಿಂದೆ ಬಾಲಿವುಡ್ ಆಫರ್ ಒಂದನ್ನು ತಿರಸ್ಕರಿಸಿದ್ದು ಸುದ್ದಿಯಾಗಿತ್ತು. ಆದರೆ ಇದಕ್ಕೆ ನಿಜ ಕಾರಣವೇನೆಂದು ರಶ್ಮಿಕಾ ಬಯಲು ಮಾಡಿದ್ದಾರೆ.ತೆಲುಗಿನ ಜೆರ್ಸಿ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗುತ್ತಿದ್ದಕ್ಕೆ ಈ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ರಶ್ಮಿಕಾ ಈ ಆಫರ್ ತಿರಸ್ಕರಿಸಿದ್ದಾರೆ ಎಂಬ ಸುದ್ದಿಬಂದಿತ್ತು.ಇತ್ತೀಚೆಗಿನ ಸಂದರ್ಶನವೊಂದರಲ್ಲಿ ರಶ್ಮಿಕಾ ಈ ಬಗ್ಗೆ ಮಾತನಾಡಿದ್ದು