ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಬದುಕು- ಸಿನಿಮಾ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಬಾಳೆ ಬಂಗಾರ’ ಸಾಕ್ಷ್ಯ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ. ಭಾರತಿ ವಿಷ್ಣುವರ್ಧನ್ ಅವರ ಅಳಿಯ, ನಟ ಅನಿರುದ್ಧ ಈ ಸಾಕ್ಷ್ಯ ಚಿತ್ರವನ್ನು ನಿರ್ದೇಶಿಸಿ, ತೆರೆಗೆ ತಂದಿದ್ದಾರೆ. ಚಿತ್ರರಂಗದ ಗಣ್ಯರಿಗಾಗಿ ಇತ್ತೀಚೆಗೆ ಬಾಳೇ ಬಂಗಾರ’ ಸಾಕ್ಷ್ಯ ಚಿತ್ರದ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಚಿತ್ರರಂಗದ ಅನೇಕರು ಭಾಗಿಯಾಗಿ, ಭಾರತಿ ವಿಷ್ಣುವರ್ಧನ್ ಅವರನ್ನು ಅಭಿನಂದಿಸಿದರು.