ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆದಿದ್ದು, ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರು ಪ್ರಶಸ್ತಿ ಸ್ವೀಕರಿಸಿದ್ದಾರೆ.ಈ ಬಾರಿ ಕನ್ನಡ ಸಿನಿಮಾಗಳೂ ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿತ್ತು. ಅದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾವೂ ಒಂದು.ಈ ಸಿನಿಮಾದ ನಿರ್ದೇಶನಕ್ಕಾಗಿ ರಿಷಬ್ ಶೆಟ್ಟಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರಿಂದ ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದಲ್ಲದೆ, ಶ್ರುತಿ ಹರಿಹರನ್ ಅಭಿನಯದ ನಾತಿಚರಾಮಿ ಸಿನಿಮಾ ಕೂಡಾ ಪ್ರಶಸ್ತಿಗೆ ಭಾಜನವಾಗಿದೆ.