ಬೆಂಗಳೂರು: ಕೆಜಿಎಫ್ 2 ಸಿನಿಮಾದ ಟೀಸರ್ ಇಂದು ಬರುತ್ತೆ ನಾಳೆ ಬರುತ್ತೆ ಎಂಬ ಭರವಸೆಯಲ್ಲೇ ಕಾದು ಕಾದು ಬೇಸತ್ತ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಈಗ ಹೊಸ ನಿರ್ಧಾರ ಕೈಗೊಂಡಿದ್ದಾರೆ. ಎಲ್ಲಾ ಸರಿ ಹೋಗಿದ್ದರೆ ಜನವರಿ 8 ರಂದು ಯಶ್ ಬರ್ತ್ ಡೇ ದಿನವೇ ಟೀಸರ್ ಬರಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಆಗುತ್ತಿಲ್ಲ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದರು. ಟೀಸರ್ ಬರುತ್ತೆ ಎಂದು ಕಳೆದ ನಾಲ್ಕು ತಿಂಗಳಿನಿಂದ ಕಾದು